Video Report | ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ, ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಸಂಜೆ ಸ್ಯಾಂಟ್ರೋ ಕಾರಿನಲ್ಲಿ ಮನೆಯಿಂದ ಹೋಗಿದ್ದ ಧರ್ಮೇಗೌಡ ಅವರು ರಾತ್ರಿಯಾದರೂ ಮನೆಗೆ ಬಾರದೇ ಇದ್ದುದ್ದರಿಂದ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ.

ಅವರ ಪಾರ್ಥೀವ ಶರೀರವನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಮರಣೋತ್ತರ ಪರೀಕ್ಷೆ ಬಳಿಕ ಜಿಲ್ಲಾಡಳಿತದಿಂದ ನಿಧನಹೊಂದಿದ ಧರ್ಮೇಗೌಡರ ಪಾರ್ಥೀವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಲ್ಲಿಸಲಾಯಿತು. ಶವಾಗಾರದ ಮುಂಭಾಗದಲ್ಲಿಯೇ ಕೆಲ ಹೊತ್ತು ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಸಚಿವ ಭೈರತಿ ಬಸವರಾಜು ಸೇರಿದಂತೆ ಗಣ್ಯರು ಉಪ ಸಭಾಪತಿಗಳ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

error: Content is protected !!