ಸುದ್ದಿ ಕಣಜ.ಕಾಂ
ಭದ್ರಾವತಿ: ನಗರದ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೊನಿಯ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಹನ್ನೊಂದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತರಿಂದ ಜೂಜಾಟದಲ್ಲಿ ಪಣವಾಗಿಟ್ಟಿದ್ದ 10,060 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ | ತಾಯಿಯೊಂದಿಗೆ ಬಂದ ಮಕ್ಕಳು ಹೆಣವಾದರು
ಕಾರ್ಯಾಚರಣೆಯಲ್ಲಿದ್ದವರು: ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಭದ್ರಾವತಿ ಡಿವೈಎಸ್.ಪಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಭದ್ರಾವತಿ ಸಿಪಿಐ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ನ್ಯೂಟೌನ್ ಪೊಲೀಸ್ ಠಾಣೆ ಪಿ.ಎಸ್.ಐ ಎಸ್.ಎನ್. ಭಾರತಿ, ಸಿಬ್ಬಂದಿಯಾದ ಎಚ್.ಸಿ.ರೂಪೇಶ್, ರವಿ, ಮಂಜುನಾಥ್, ಎನ್.ಬಸವರಾಜ್, ಅಶೋಕ್, ಪಾಲಾಕ್ಷ ನಾಯ್ಕ್, ಬಸವರಾಜ್ ತಂಡ ಕಾರ್ಯಾಚರಣೆ ನಡೆಸಿದೆ.