ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕನ್ನಡ ಪುಸ್ತಕ ಪ್ರಾಧಿಕಾರವು ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳಿಡೀ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದೆ.
ಎಲ್ಲಿ ಲಭ್ಯ: ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುವುದು. ಜತೆಗೆ, ಪ್ರಾಧಿಕಾರದ ಆನ್ ಲೈನ್ನಲ್ಲಿಯೂ ಮಾರಾಟಕ್ಕೆ ಉದ್ದೇಶಿಸಲಾಗಿದೆ. ಸಾಹಿತ್ಯಾಸಕ್ತರು ಈ ಅವಕಾಶದ ಲಾಭ ಪಡೆದುಕೊಳ್ಳುವಂತೆ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಗಣರಾಜ್ಯೋತ್ಸವ ಪೆರೇಡ್ನಲ್ಲಿ ಶಿವಮೊಗ್ಗ ರಂಗಾಯಣ ಖದರ್
ಅಲ್ಲದೇ ಪ್ರಾಧಿಕಾರದ ಪುಸ್ತಕಗಳನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಸಾಹಿತ್ಯ ಕೃತಿಗಳನ್ನು ಇದುವರೆಗೆ ಪ್ರಕಟಿಸುತ್ತ ಬಂದಿದೆ. ಇವುಗಳಲ್ಲಿ ವ್ಯಕ್ತಿಚಿತ್ರ, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ ಕೃಷಿ ಹೀಗೆ ಹತ್ತು ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು 446ಕ್ಕೂ ಅಧಿಕ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸುವ ಉದ್ದೇಶ ಪ್ರಾಧಿಕಾರದ್ದಾಗಿದೆ ಎಂದು ತಿಳಿಸಿದ್ದಾರೆ.