ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಬಗ್ಗೆ ಶೀಘ್ರವೇ ಸಂಪುಟದಲ್ಲಿ ನಿರ್ಧಾರ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದರು.
ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಬೇರೆ ದೇಶಗಳ ಮೇಲೆ ಅವಲಂಬಿತಾಗದೆ ನಮ್ಮ ವಿಜ್ಞಾನಿಗಳು ಸ್ವದೇಶಿಯಾಗಿ ಕೋವಿಡ್ ಗೆ ಲಸಿಕೆ ಸಿದ್ಧಪಡಿಸಿದ್ದಾರೆ. ಇದು ಎಲ್ಲರಿಗೂ ಹೆಮ್ಮೆ ತರುವ ವಿಚಾರವಾಗಿದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುತ್ತಿದೆ. ಮೂರು ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕುವ ಗುರಿ ಇದೆ. ಶಿವಮೊಗ್ಗದಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ 25 ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಕೊಡಲಾಗುವುದು. ಮುಂದಿನ ಹಂತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಲಾಗುವುದ.
– ಬಿ.ವೈ.ರಾಘವೇಂದ್ರ, ಸಂಸದರು

ಕೊರೊನಾ ಪಿಡುಗಿನ ವಿರುದ್ಧ ಇತರ ದೇಶಗಳಿಗೆ ಹೋಲಿಸಿದರೆ ಭಾರತ ಸಿದ್ಧಪಡಿಸಿರುವ ಲಸಿಕೆ ಅತ್ಯಂತ ಕಡಿಮೆ ದರದ್ದಾಗಿದಾಗಿದೆ. ಬಡವರಿಗೂ ಇದರಿಂದ ಭಾರಿ ಪ್ರಯೋಜನ ಆಗಲಿದೆ ಎಂದು ಹೇಳಿದರು.

ಇದನ್ನೂ ಓದಿ । ಶಿವಮೊಗ್ಗದ 9 ಕೇಂದ್ರಗಳಲ್ಲಿ ಶುರುವಾಯ್ತು ಕೊರೊನಾ ಲಸಿಕೆ ನೀಡುವ ಕಾರ್ಯ

ಬೇರೆ ದೇಶಗಳ ಲಸಿಕೆಯನ್ನು ಮೈನಸ್ ಡಿಗ್ರಿಯಲ್ಲಿ ಸಂಗ್ರಹಿಸಿಡುವ ಅನಿವಾರ್ಯತೆ ಇದೆ. ನಮ್ಮ ದೇಶದಲ್ಲಿ ತಯಾರಿಸಿರುವ ಲಸಿಕೆಯನ್ನು ಸುಲಭವಾಗಿ ದಾಸ್ತಾನು ಮಾಡಬಹುದು. ಕೊರೊನಾ ವಿರುದ್ಧ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಿ ಯಶಸ್ವಿಯಾಗಿ ಎದುರಿಸಿದ್ದೇವೆ. ಇದೀಗ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ಲಸಿಕೆಯನ್ನು ಸಿದ್ಧಪಡಿಸಿರುವುದು ನಮ್ಮೆಲ್ಲರ ಹೆಮ್ಮೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಶಾಸಕ ಅಶೋಕ್ ನಾಯ್ಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಮೆಗ್ಗಾನ್ ನಿರ್ದೇಶಕರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.

error: Content is protected !!