ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪೋಷಕರು ಮತ್ತು ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಈ ಎಲ್ಲ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಶುಲ್ಕ ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭರವಸೆ ನೀಡಿದರು.
ಎಲ್ಲ ಮಾಹಿತಿ ಈ VIDEO REPORTನಲ್ಲಿದೆ, ಕ್ಲಿಕ್ ಮಾಡಿ ವೀಕ್ಷಿಸಿ
ನಗರದ ರಂಗಮಂದಿರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಈಗಾಗಲೇ ಶಿಕ್ಷಣ ಇಲಾಖೆಯ ಆಯುಕ್ತರು ಖಾಸಗಿ ಶಾಲೆಗಳ ಮುಖ್ಯಸ್ಥರು ಹಾಗೂ ಪೋಷಕರೊಂದಿಗೆ ಸಮಾಲೋಚನೆ ಮಾಡಿದ್ದಾರೆ. ಅದರ ಆಧಾರದ ಮೇಲೆ ಶುಲ್ಕ ನಿಗದಿಪಡಿಸಿ ನನಗೆ ನೀಡಲಾಗಿದೆ. ಅದನ್ನು ನೋಡಿ, ಇನ್ನೆರಡು ದಿನಗಳಲ್ಲಿ ಇಬ್ಬರಿಗೂ ಸಮಸ್ಯೆಯಾಗದ ಶುಲ್ಕವನ್ನು ಘೋಷಿಸಲಾಗುವುದು ಎಂದು ಹೇಳಿದರು.
ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.