ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಮಾರ್ಚ್ ಮೊದಲ ವಾರದಲ್ಲಿ ಆಗಮಿಸುವ ಸಾಧ್ಯತೆ ಇದೆ. ಸಚಿವರು ಆ ಸಂದರ್ಭದಲ್ಲಿ ರೈಲ್ವೆ ಕಾಮಗಾರಿಗಳ ಭೂಮಿಪೂಜೆ ಮತ್ತು ಉದ್ಘಾಟನೆ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.