ಸುದ್ದಿ ಕಣಜ.ಕಾಂ
ಭದ್ರಾವತಿ: ಮೆಸ್ಕಾಂ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.
ಎಇಇ ಬಿ.ಎಸ್. ಪ್ರಕಾಶ್ ಎಸಿಬಿ ಬಲೆಗೆ ಬಿದ್ದಿದ್ದು, ಇವರನ್ನು ಬಂಧಿಸಲಾಗಿದೆ.
ಲಂಚಕ್ಕೆ ಬೇಡಿಕೆ | ಗಂಗಾ ಕಲ್ಯಾಣ ಯೋಜನೆ ಅಡಿ ಕೊಳವೆಬಾವಿಗೆ ಟಿಸಿ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವುದಕ್ಕಾಗಿ ಪ್ರಕಾಶ್ ಅವರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಭದ್ರಾವತಿ ತಾಲೂಕಿನ ಆನವೇರಿಯ ಎನ್.ಹರೀಶ್ ಅವರು ಅವರು ಎಸಿಬಿಗೆ ದೂರು ನೀಡಿದ್ದರು. ಮೆಸ್ಕಾಂನ ಹೊಳೆಹೊನ್ನೂರು ಉಪ ವಿಭಾಗದ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುವಾಗ ಗುರುವಾರ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಪೂರ್ವ ವಲಯದ ಪೊಲೀಸ್ ಅಧೀಕ್ಷಕ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಡಿವೈ.ಎಸ್.ಪಿ ಜೆ.ಲೋಕೇಶ್ ನೇತೃತ್ವದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿ ಎನ್.ಕೆ.ವಸಂತ್, ರಘುನಾಯ್ಕ್, ನಾಗರಾಜ್, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.