ಸುದ್ದಿ ಕಣಜ.ಕಾಂ
ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತ ಅಭಿವೃದ್ಧಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.
ರಾಜ್ಯ ಸರ್ಕಾರ 165 ಕೋಟಿ ರೂಪಾಯಿ ವೆಚ್ಚದಲ್ಲಿ 24 ಕಾಮಗಾರಿಗಳೊಂದಿಗೆ ಸಮಗ್ರ ಅಭಿವೃದ್ದಿಪಡಿಸುವ ಯೋಜನೆಗೆ ಅನುಮೋದನೆ ನೀಡಿದೆ.
ಇದನ್ನೂ ಓದಿ । ನೆಡುತೋಪಿನ ಬಗ್ಗೆ IISc ವಿಜ್ಞಾನಿಗಳು ಹೇಳಿದ್ದೇನು? ಎಂಪಿಎಂ ಕುರಿತು ಜೀವವೈವಿಧ್ಯ ಮಂಡಳಿ ಅಧ್ಯಕ್ಷರು ಸಿಎಂಗೆ ಮನವಿ
ವಿಶ್ವ ವಿಖ್ಯಾತ ಜೋಗ ಜಲಪಾತವು ಇನ್ನಷ್ಟು ಆಕರ್ಷಣೀಯವಾಗಿ ಪ್ರವಾಸಿಗರನ್ನು ಸೆಳೆಯಲಿದೆ. ಅದಕ್ಕಾಗಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ರಾಜ್ಯ ಸರ್ಕಾರ 165 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ. ಜತೆಗೆ, ಸಕ್ರೆಬೈಲು ಆನೆಬಿಡಾರ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ.
– ಬಿ.ವೈ.ರಾಘವೇಂದ್ರ, ಸಂಸದರು