23ರಂದು ಮೈಸೂರು, ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಯಡಿಯೂರಪ್ಪ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 23ರಂದು ಮೈಸೂರು ಮತ್ತು ಶಿವಮೊಗ್ಗಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದ ಮೂಲಕ ಹೊರಟು 10.50 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.

ಇದನ್ನೂ ಓದಿ । ಖಾಸಗಿ ಶಾಲೆ ಶುಲ್ಕ ನಿಗದಿಗೆ ಡೆಡ್‍ಲೈನ್ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಹೇಳಿದ್ದೇನು ಗೊತ್ತಾ?

ಮೈಸೂರಿನ ಜೆ.ಪಿ.ನಗರ ಶರಣ ವೇದಿಕೆಯು ಆಯೋಜಿಸಿರುವ ಅಕ್ಕಮಹಾದೇವಿ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಮಹರ್ಷ ಶಾಲೆ ಮತ್ತು ಡಿಎವಿ ಶಾಲೆಯ ಮಕ್ಕಳಿಂದ ಮನಸ್ವೀಕರಿಸುವರು.

12.30ಕ್ಕೆ ಬಸವ ಸಮಿತಿ ಆಯೋಜಿಸಿರುವ ಬಸವ ಭವನ ಉದ್ಘಾಟನೆ ನೆರವೇರಿಸುವರು. 2.30 ಗಂಟೆಗೆ ಮೈಸೂರಿನಿಂದ ಹೊರಟು 3.45ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ಗೆ ಆಗಮಿಸುವರು.

ಇದನ್ನೂ ಓದಿ । ಎಸ್‍ಎಸ್‍ಎಲ್‍ಸಿ, ಪಿಯುಸಿ ವಾರ್ಷಿಕ ಪರೀಕ್ಷೆ ಪ್ರಶ್ನೆ ಪತ್ರಿಕೆ ತಯಾರಿಕೆ, ತರಗತಿ ಅವಧಿ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ?

ಅಂದು ಸಂಜೆ 7.30ಕ್ಕೆ ಪ್ರೇರಣಾ ಕನ್ವೆನ್ಷನ್ ಹಾಲ್ ನಲ್ಲಿ ನಡೆಯುವ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪುತ್ರ ಆಯನೂರು ಸಂತೋಷ್ ಮತ್ತು ಎನ್.ಲಾವಣ್ಯ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸುವರು.

ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಇರಲಿದ್ದು, ಜನವರಿ 24ರಂದು ಬೆಳಗ್ಗೆ 9 ಗಂಟೆಗೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

error: Content is protected !!