ಸುದ್ದಿ ಕಣಜ.ಕಾಂ
ಬೆಂಗಳೂರು: ಕೊರೊನಾ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಬರಲು 45 ದಿನಗಳು ಬೇಕು. ಈ ಅವಧಿಯಲ್ಲಿ ವೈರಾಣು ಸಂಪರ್ಕಕ್ಕೆ ಬಂದರೆ ಸೋಂಕು ತಗಲುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಮೊದಲ ಡೋಸ್ ಪಡೆದ 28 ದಿನ ಬಳಿಕ ಎರಡನೇ ಡೋಸ್ ಪಡೆಯಬೇಕು. ಎರಡನೇ ಡೋಸ್ ಪಡೆದ 14ರಿಂದ15 ದಿನಗಳ ಬಳಿಕ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ವ್ಯಕ್ತಿಯಲ್ಲಿ ಬರುತ್ತದೆ ಎಂದು ಹೇಳಿದ್ದಾರೆ.
ರಾಜ್ಯದ ನಾನಾ ಕಡೆ ಕೊರೊನಾ ಲಸಿಕೆ ಪಡೆದ ಬಳಿಕವೂ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.