ನಾಳೆ ನಡೆಯಬೇಕಿದ್ದ ಎಫ್.ಡಿ.ಎ ಪರೀಕ್ಷೆ ಮುಂದೂಡಿಕೆ, ಕಾರಣವೇನು ಗೊತ್ತಾ?

 

 

FDA Examಸುದ್ದಿ ಕಣಜ.ಕಾಂ
ಬೆಂಗಳೂರು: ರಾಜ್ಯದಲ್ಲಿ ಜನವರಿ 24ರಂದು ನಡೆಯಬೇಕಿದ್ದ 219ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣವೇನು?: ರಾಜ್ಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜನವರಿ 23ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು. ಆದರೆ, 23ರಂದು ಬಲ್ಲ ಮೂಲಗಳಿಂದ ಸ್ವಕೃತಗೊಂಡ ಮಾಹಿತಿ ಪ್ರಕಾರ, ಪ್ರಶ್ನೆ ಪತ್ರಿಕೆಯೂ ಕೆಲವೊಂದು ದುಷ್ಕರ್ಮಿಗಳ ಕೈಸೇರಿದ್ದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪರೀಕ್ಷೆಗಳ ದಿನಾಂಕವನ್ನು ಮರು ನಿಗದಿಪಡಿಸಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!