ಸುದ್ದಿ ಕಣಜ.ಕಾಂ
ಬೆಂಗಳೂರು: ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ತತ್ ಕ್ಷಣದಿಂದ ಜಾರಿಗೊಳಿಸಿ ಆದೇಶಿಸಲಾಗಿದೆ.
ಕೋವಿಡ್ ಹಿನ್ನೆಲೆ ಗಳಿಕೆ ರಜೆಯನ್ನು ಕಡಿತಗೊಳಿಸಿ ಸರ್ಕಾರ ಆದೇಶಿಸಿತ್ತು. ಆದರೆ, ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ನಂತರ ಅನುಮೋದನೆ ನೀಡುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಅದರನ್ವಯ, ಜನವರಿ 28ರಂದು ಆದೇಶ ಹೊರಬಿದ್ದಿದೆ.
ಇದನ್ನೂ ಓದಿ । ಗಳಿಕೆ ರಜೆ ನಗದೀಕರಣಕ್ಕೆ ಸಿಎಂ ಅನುಮೋದನೆ
2021ನೇ ಸಾಲಿನ ಬ್ಲಾಕ್ ಅವಧಿಗೆ 15 ದಿನಗಳಿಗೆ ಮೀರದ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನದಗೀಕರಣ ಸೌಲಭ್ಯ ಪಡೆಯುವ ಯೋಜನೆಯನ್ನು ಜಾರಿಗೆ ಆದೇಶಿಸಲಾಗಿದೆ.
ಇದನ್ನೂ ಓದಿ । ಅಡಕೆಯನ್ನು ಡ್ರಗ್ಸ್ ಪಟ್ಟಿಗೆ ಸೇರಿಸಿ ಎಡವಟ್ಟು, ಬೆಳೆಗಾರರ ಆಕ್ರೋಶ