ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸರ್ಕಾರದ ಅಧಿಕೃತ ಜಾಲತಾಣವಾದ ರಾಜ್ಯ ಕೃಷಿ ಮಾರಾಟ ಮಂಡಳಿಯ ವೆಬ್ ಸೈಟ್ ನಲ್ಲಿ ಅಡಕೆಯನ್ನು ಮಾದಕ ವಸ್ತುಗಳ ಪಟ್ಟಿಗೆ ಸೇರಿಸುವ ಮೂಲಕ ಭಾರಿ ವಿರೋಧಕ್ಕೆ ಕಾರಣವಾಗಿತ್ತು. ಆದರೆ, ತಾನು ಮಾಡಿದ ಪ್ರಮಾದವನ್ನು ಮಂಡಳಿಯು ತಿದ್ದಿಕೊಂಡಿದೆ.
ಇದನ್ನೂ ಓದಿ । ಅಡಕೆಯನ್ನು ಡ್ರಗ್ಸ್ ಪಟ್ಟಿಗೆ ಸೇರಿಸಿ ಎಡವಟ್ಟು, ಬೆಳೆಗಾರರ ಆಕ್ರೋಶ
ಮಾದಕ ವಸ್ತುಗಳ ಪಟ್ಟಿಗೆ ಸೇರಿಸಿದ್ದ ಅಡಕೆ ಮತ್ತು ವೀಳ್ಯದೆಲೆಯನ್ನು ತೋಟಗಾರಿಕೆ ಕೆಟಗರಿಗೆ ಸೇರಿಸಲಾಗಿದೆ. ಈಗಾಗಲೇ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ಅಫಿಡೇವಿಟ್ ಸಲ್ಲಿಸಿದ್ದರ ಪರಿಣಾಮವಾಗಿಯೇ ಅಡಕೆ ಬೆಳೆಗಾರರು ಭಾರಿ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಇಂತಹ ದೊಡ್ಡ ಪ್ರಮಾದ ಎಸಗಿದ್ದರಿಂದ ಅಡಕೆ ಬೆಳೆಗಾರರಿಗೆ ಸಮಸ್ಯೆಯಾಗಿದೆ ಎಂಬುವುದು ಅಡಕೆ ಬೆಳೆಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.