ಚಾಕುವಿನಿಂದ ಇರಿದು ಯುವಕನ ಕೊಲೆ, ಇನ್ನೊಬ್ಬನ ಸ್ಥಿತಿ ಗಂಭೀರ, ಎಲ್ಲಿ ನಡೀತು ಘಟನೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಇಬ್ಬರು ಯುವಕರ ಮೇಲೆ ದಾಳಿ ಮಾಡಿದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ. ಒಬ್ಬನಿಗೆ ಚಾಕು ಇರಿಯಲಾಗಿದ್ದು, ಆತ ಮೃತಪಟ್ಟಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್.ಪುರಂ ನಿವಾಸಿ ಜೀವನ್ (26) ಮೃತಪಟ್ಟ ಯುವಕ. ಸೀಗೆಹಟ್ಟಿಯ ಕೇಶವ್ (27) ಗಾಯಗೊಂಡಿದ್ದಾನೆ.
ಎಲ್ಲಿ ನಡೀತು ಘಟನೆ | ನಗರದ ಎನ್.ಟಿ.ರಸ್ತೆಯಲ್ಲಿರುವ ಸುಂದರಾಶ್ರಯ ಲಾಡ್ಜ್ ಸಮೀಪ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಜೀವನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ತಿಳಿದುಬಂದಿದೆ. ವಿಚಾರ ಗೊತ್ತಾಗುತ್ತಿದ್ದಂತೆಯೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಜೀವನ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

error: Content is protected !!