ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಶಂಕರ ಮಠ ಹಿಂಭಾಗದ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಡೆಲ್ ಸಬ್ ಡಿವಿಷನ್ ಯೋಜನೆಯಡಿ ಕೇಬಲ್ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜನವರಿ 22ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗ 1ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.