ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಈಗಾಗಲೇ ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.
ನಗರದ ಈಡಿಗ ಭವನದಲ್ಲಿ ಮಲೆನಾಡು ದೀವರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಮಿತಿ, ರಾಮ ಮನೋಹರ ಲೋಹಿಯಾ ಟ್ರಸ್ಟ್ ಕಾಗೋಡು ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಬೂಮಣ್ಣಿ ಬುಟ್ಟಿ ಚಿತ್ತಾ ಸ್ಪರ್ಧೆ ಚಿತ್ತಾರಗಿತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.