ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಫೀಡರ್ ಎ.ಎಫ್ 5ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 8 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲಿ ಕರೆಂಟ್ ಕಟ್ | ಸಾಗರ ರಸ್ತೆ, ದೊಡ್ಡಪೇಟೆ ಪೊಲೀಸ್ ಸ್ಟೇಷನ್, ಎಸ್.ಪಿ.ಕಚೇರಿ, ಅಶೋಕನಗರ, ಎ.ಆರ್.ಬಿ ಕಾಲೊನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.