ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರದ `ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯಡಿ ಶಿವಮೊಗ್ಗಕ್ಕೆ `ಅನಾನಸ್’ ಬೆಳೆಯನ್ನು ನಿಗದಿಪಡಿಸಲಾಗಿದೆ. ಇದೇ ಯೋಜನೆಯಡಿ ಜಿಲ್ಲೆಗೆ ಸಂಬಂಧಿಸಿದಂತೆ ಅಡಕೆ ಬೆಳೆಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅಡಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ತಿಳಿಸಿದರು.
ಇದನ್ನೂ ಓದಿ । ಅಡಕೆ ಕಾರ್ಯಪಡೆ ಸಭೆಯಲ್ಲಿ ಮಹತ್ವದ ನಿರ್ಧಾರ
ಮಂಗಳವಾರ ಕಾರ್ಯಪಡೆಯ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಆಮದು ಅಡಕೆಗೆ ಕೇಂದ್ರ ಸರ್ಕಾರದಿಂದ ಕನಿಷ್ಠ ಆಮದು ದರ ಕೆಜಿಗೆ 250 ರೂಪಾಯಿ ಇದೆ. ಅದನ್ನು 350 ರೂಪಾಯಿಗೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಶಾಸಕ ಹರತಾಳು ಹಾಲಪ್ಪ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಉಪಸ್ಥಿತರಿದ್ದರು.