ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯು `ಬಾಲ ಗೌರವ ಪ್ರಶಸ್ತಿ’ ನೀಡಲಿದೆ.
ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿರುವ 18 ವರ್ಷದೊಳಗಿನ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹತೆಗಳೇನು | ಮಕ್ಕಳು ಸಂಗೀತ, ನೃತ್ಯ, ನಟನೆ, ಕ್ರೀಡೆ, ಚಿತ್ರಕಲೆ, ಕರಕುಶಲ, ಬರವಣಿಗೆ, ಸಂಶೋಧನೆ (ಹೊಸ ಆವಿಷ್ಕಾರ) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪುರಷ್ಕøತ ಮಗುವಾಗಿರಬೇಕು.
ಅರ್ಹತೆ ಇರುವವರು ಸ್ವಯಂ ದೃಢೀಕೃತ ನಕಲು ದಾಖಲೆ, ಸ್ವ ವಿವರ ಒಳಗೊಂಡ ಮನವಿಯೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಇಲ್ಲಿ ಸಲ್ಲಿಸಿ | ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ ಕಾಲೊನಿ, ಲಕಮನಹಳ್ಳಿ ಧಾರವಾಡ 580004.
ಅರ್ಜಿಯನ್ನು ಫೆಬ್ರವರಿ 20.ರೊಳಗೆ ಕಳಿಸತಕ್ಕದ್ದು. ‘ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ’ ಎಂದು ಲಕೋಟೆ ಮೇಲೆ ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0836 2461666 ನ್ನು ಸಂಪರ್ಕಿಸುವಂತೆ ಕೋರಲಾಗಿದೆ.