ಸುದ್ದಿ ಕಣಜ.ಕಾಂ
ಶಿಕಾರಿಪುರ: ಈ ಸಲದ ರಾಜ್ಯ ಬಜೆಟ್.ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಘೋಷಿಸಿದ್ದಾರೆ.
ಇದನ್ನೂ ಓದಿ । ಕುಂಚಿಟಿಗ ಸಮಾಜದ ಮಹ್ವತದ ಸಭೆ, ಕೇಂದ್ರದಲ್ಲಿ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯ
ಶಿಕಾರಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಜನಪರ ಬಜೆಟ್ ಮಂಡಿಸಲಾಗುವುದು ಎಂದರು.
ಮೀಸಲಾತಿ ಹೋರಾಟ ನ್ಯಾಯಬದ್ಧ | ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಖ್ಯಮಂತ್ರಿಗಳು ಸ್ವಾಗತಿಸಿದ್ದು, ಅವುಗಳು ನ್ಯಾಯಬದ್ಧವಾಗಿವೆ ಎಂದು ಹೇಳಿದರು.
ಶೇ.10ರಷ್ಟು ಸರ್ಕಾರದಿಂದ ಪಾವತಿ | ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಫಲಾನುಭವಿ ಮನೆಯವರು ನೀಡಬೇಕಾಗಿರುವ ಕಾಮಗಾರಿಯ ಶೇ.10ರಷ್ಟು ಹಣವನ್ನು ಸರಕಾರದಿಂದ ನೇರವಾಗಿ ಪಾವತಿಸುವ ಕುರಿತು ಈ ಬಾರಿಯ ಬಜೆಟ್ ನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಕಾನೂನು ಮತ್ತು ಸಂವಿಧಾನದ ಚೌಕಟ್ಟಿನಲ್ಲಿ ಅವರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.