ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂತೇಕಡೂರು ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ 12 ರಿಂದ 28ರ ವರೆಗೆ ಪ್ರತಿದಿನ ಬೆಳಗ್ಗೆ 11ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಿ ಕರೆಂಟ್ ಕಟ್ | ಸಂತೇಕಡೂರು, ಶ್ರೀರಾಮನಗರ, ರಾಮಪುರ, ಭಂಡಾರಿ ಕ್ಯಾಂಪ್, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.