ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದ ಐಟಿಐಗಳನ್ನು ಟಾಟಾ ಟೆಕ್ನಾಲಜಿ ಸಂಸ್ಥೆಯ ಸಹಯೋಗದಲ್ಲಿ 4,636 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಆಯೋಜಿಸಿದ್ದ ಮಾಚೇನಹಳ್ಳಿ ಕೈಗಾರಿಕ ಸಂಘದ ರಜತ ಮಹೋತ್ಸವ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸಾಗರ, ತೀರ್ಥಹಳ್ಳಿ ಮತ್ತು ಕಾರ್ಗಲ್ ಐಟಿಐಗಳನ್ನು ಸಹ ಮೇಲ್ದರ್ಜೆಗೆ ಏರಿಸುವ ಮೂಲಕ ಯುವಜನತೆಗೆ ಹೆಚ್ಚಿನ ಕೌಶಲ್ಯ ಒದಗಿಸುವ ಕಾರ್ಯವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಭಾರತಿ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.