ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.
ಈ ಪರಿಕಲ್ಪನೆಯ ಅಂಗವಾಗಿ ಫೆಬ್ರವರಿ 20ರ ಶನಿವಾರ ಬೆಳಗ್ಗೆ 11ಕ್ಕೆ ಶಿಕಾರಿಪುರ ತಾಲೂಕು, ಉಡುಗಣಿಯ ತಡಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಜೊತೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ನೀಡುವ ಉದ್ದೇಶದಿಂದ ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆದ್ದರಿಮದ ತಡಸನಹಳ್ಳಿಯ ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ, ಫೆಬ್ರವರಿ 20 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.