ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ನಗರ ಪ್ರದೇಶ ಹಾಗೂ ತಾಲೂಕು ಕೇಂದ್ರಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಂದ ಸ್ವಯಂ ಉದ್ಯೋಗ ಯೋಜನೆ (ಇ-ಕಾರ್ಟ್) ಅಡಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ । ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಮೇಕೆ ಘಟಕ ಸ್ಥಾಪನೆ | ಗ್ರಾಮೀಣ ಭಾಗದ ಪರಿಶಿಷ್ಟ ಪಂಗಡದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸ್ವಯಂ ಉದ್ಯೋಗ ಯೋಜನೆಯಡಿ ಕುರಿ ಅಥವಾ ಮೇಕೆ ಘಟಕಗಳನ್ನು ಸ್ಥಾಪಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತಿಯುಳ್ಳವರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಗಳ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 15ರೊಳಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-279222ಗೆ ಸಂಪರ್ಕಿಸಬಹುದು.