ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2019-20ನೇ ಸಾಲಿನ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ತರಬೇತಿ ಯೋಜನೆ ಅಡಿ ಕಿಯೋನಿಕ್ಸ್ ಸಹಯೋಗದೊಂದಿಗೆ ಮೂರು ತಿಂಗಳ ಅವಧಿಯ ತರಬೇತಿಯನ್ನು ಆಯೋಜಿಸಿದೆ.
ಯಾವ ಕೋರ್ಸ್ | ಅಕೌಂಟಿಂಗ್ ಮತ್ತು ಟ್ಯಾಲಿ, ಕಂಪ್ಯೂಟರ್ ಪ್ರೋಗ್ರಾಮರ್ ಕೋರ್ಸ್, ಕಾಲ್ ಸೆಂಟರ್ ಟ್ರೈನಿಂಗ್, ಕಂಪ್ಯೂಟರೈಸ್ಡ್ ಫ್ಯಾಶನ್ ಡಿಸೈನಿಂಗ್ ಟೈಲರಿಂಗ್ ತರಬೇತಿಗಳಿಗೆ ಆಸಕ್ತ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಗಾಂಧಿನಗರ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182-224349 ಹಾಗೂ ಸಂಬಂಧಿಸಿದ ತಾಲೂಕು ಮಟ್ಟದ ಸಮಾಜ ಕಲ್ಯಾಣ ಇಲಾಖೆಗಳನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.