ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆರ್.ಎಂ.ಎಲ್ ನಗರದಲ್ಲಿ ಬಾಲಕಿಯೊಬ್ಬಳ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವೈರಲ್ ಆಗಿದೆ.
ಆರ್.ಎಂ.ಎಲ್ ನಗರದ ನಿವಾಸಿ ನಾಲ್ಕು ವರ್ಷದ ಯಾದೇವಿ ಎಂಬ ಬಾಲಕಿಯ ಮೇಲೆ ನಾಯಿ ಏಕಾಏಕಿ ದಾಳಿ ನಡೆಸಿದೆ. ತಪ್ಪಿಸಿಕೊಳ್ಳಲು ಯತ್ನಿಸಿದರೂ ಬಟ್ಟೆ ಹಿಡಿದು ಎಳೆದಾಡಿದೆ. ಬಳಿಕ ಭಯಭೀತಳಾದ ಯಾದೇವಿ ಕೂಗಾಡಿದ್ದಾಳೆ. ನಂತರ, ಮನೆಯಿಂದ ಜನ ಹೊರಗೆ ಬಂದು ನಾಯಿಯನ್ನು ಓಡಿಸಿದ್ದಾರೆ.
ಆಸ್ಪತ್ರೆಗೆ ದಾಖಲು | ಆರ್.ಎಂ.ಎಲ್ ನಗರದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿಯ ಮೇಲೆ ನಾಯಿ ದಾಳಿ ಮಾಡಿದ್ದರಿಂದ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಜೀವಕ್ಕೇನೂ ಅಪಾಯವಿಲ್ಲ ಎಂದು ತಿಳಿದುಬಂದಿದೆ.