ಖಾಸಗಿ ಸಾರಿಗೆ ಕಾರ್ಮಿಕರಿಗೆ ಅಪಘಾತ ಪರಿಹಾರ, ನೋಂದಣಿಗೆ ಇಲ್ಲಿ ಅರ್ಜಿ ಸಲ್ಲಿಸಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಖಾಸಗಿ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿರ್ವಾಹಕರು ಮತ್ತು ಕ್ಷೀನರ್ ಗಳನ್ನು ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲ್ಲಿ ಅರ್ಜಿ ಪಡೆಯಿರಿ | ಖಾಸಗಿ ವಾಣಿಜ್ಯ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿರ್ವಾಹಕರು ಮತ್ತು ಕ್ಲೀನರ್ ಗಳು ನಿಗದಿತ ನಮೂನೆ ಅರ್ಜಿಯನ್ನು ತಮ್ಮ ತಾಲೂಕುಗಳ ಕಾರ್ಮಿಕ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿ ಹಾಗೂ ತಮ್ಮ ಮಾಲೀಕರಿಂದ ಪಡೆದ ಉದ್ಯೋಗ ಪ್ರಮಾಣ ಪತ್ರವನ್ನು ಲಗತ್ತಿಸಿ ಕಾರ್ಮಿಕ ಇಲಾಖೆಗೆ ಸಲ್ಲಿಸಿ, 25 ರೂಪಾಯಿಗಳನ್ನು ನೋಂದಣಿ ಶುಲ್ಕವನ್ನು ಪಾವತಿಸಿ ಗುರುತಿನ ಚೀಟಿಯನ್ನು ಪಡೆಯುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ, ಸೂಡ ಕಾಂಪ್ಲೆಕ್ಸ್, ವಿನೋಬನಗರ. ದೂರವಾಣಿ ಸಂಖ್ಯೆ 08182 248940ಗೆ ಸಂಪರ್ಕಿಸುವಂತೆ ಕೋರಲಾಗಿದೆ.

error: Content is protected !!