ತವರು ಕ್ಷೇತ್ರಕ್ಕೆ ಸಿಎಂ ಬಂಪರ್ ಕೊಡುಗೆ, ಏನು ಗೊತ್ತಾ?

 

 

ಸುದ್ದಿ ಕಣಜ.ಕಾಂ
ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತವರು ಕ್ಷೇತ್ರ ಶಿಕಾರಿಪುರಕ್ಕೆ ಭಾನುವಾರ ಆಗಮಿಸಿದ್ದು, ಹಲವು ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ । ಹನಿ ನೀರಾವರಿ ಸಬ್ಸಿಡಿ ಬಿಡುಗಡೆಗೆ ಸಿಎಂ ಯಡಿಯೂರಪ್ಪ ಸೂಚನೆ

ತಾಲೂಕಿನಲ್ಲಿ ಹೆಚ್ಚುವರಿಯಾಗಿ ಎರಡು ಪಶು ವೈದ್ಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಮಾರ್ಚ್ ಒಳಗೆ ಕಾಮಗಾರಿ ಫಿನಿಶ್ | ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ, ಮಾರ್ಚ್ ಒಳಗಾಗಿ ಪೂರ್ಣಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ವೈ ಸೂಚನೆ ನೀಡಿದರು.
ಭಾನುವಾರ ಶಿಕಾರಿಪುರ ತಾಲೂಕು ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್ ನಾಯ್ಕ್, ಜಿಲ್ಲಾಧಿಕಾರಿ ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್.ಪಿ ಕೆ.ಎಂ. ಶಾಂತರಾಜು ಉಪಸ್ಥಿತರಿದ್ದರು.

 

error: Content is protected !!