ಸುದ್ದಿ ಕಣಜ.ಕಾಂ
ಶಿವಮೊಗ್ಗ: ದಕ್ಷಿಣ ಭಾರತದ ಕೆಲವು ರಾಜ್ಯಗಳನ್ನು ಸೇರಿದಂತೆ ಬೆಂಗಳೂರಿನಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ಕಚೇರಿ ಆರಂಭಿಸಲಾಗಿದೆ. ಅದರ ಉಪ ಪ್ರಾದೇಶಿಕ ಕೇಂದ್ರವನ್ನು ಶಿವಮೊಗ್ಗದಲ್ಲಿ ಆರಂಭಿಸುವಂತೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಐದು ಕೋಟಿ ರೂ. ವೆಚ್ಚದ ಒಳ ಕ್ರೀಡಾಂಗಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಭಾನುವಾರ ಮಾತನಾಡಿದರು.
ರಾಜ್ಯದಲ್ಲಿಯೂ ಈಜು, ಹಾಕಿ ಸೇರಿದಂತೆ ಅನೇಕ ಕ್ರೀಡೆಗಳಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದಾರೆ. ಮುಂದಿನ ಒಲಿಂಪಿಕ್ ಕ್ರೀಡೆಗಳಲ್ಲಿ ದೇಶಕ್ಕೆ ಪದಕ ತರುವ ನಿರೀಕ್ಷೆ ಇದೆ ಎಂದು ಅವರು ನುಡಿದರು.
ಸಚಿವ ಕೆ.ಎಸ್.ಈಶ್ವರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಕೆ.ಸಿ. ನಾರಾಯಣ ಗೌಡ, ಸೂಡ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ, ಪಾಲಿಕೆ ಮೇಯರ್ ಸುವರ್ಣ ಶಂಕರ್, ಊಪ ಮೇಯರ್ ಸುರೇಖಾ ಮುರಳೀಧರ್, ಕ್ರೀಡಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಒ ಎಂ.ಎಲ್. ವೈಶಾಲಿ, ಎಸ್.ಪಿ ಕೆ.ಎಂ.ಶಾಂತರಾಜು, ಆಯುಕ್ತ ಚಿದಾನಂದ್ ವಠಾರೆ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.