ಸುದ್ದಿ ಕಣಜ.ಕಾಂ
ಶಿವಮೊಗ್ಗ: ದೇವಾಂಗ ಸಮಾಜಕ್ಕೆ ಮೀಸಲಾತಿ ಸೌಲಭ್ಯ ನೀಡಬೇಕು. ಅದಕ್ಕಾಗಿ ಅಗತ್ಯವಿರುವ ಸಮೀಕ್ಷೆ ನಡೆಸಿ, ವರದಿ ಅನ್ವಯ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ದೇವಾಂಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಈಸೂರು ಬಸವರಾಜ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 15 ದಿನಗಳ ಒಳಗೆ ಸಮೀಕ್ಷೆ ಕಾರ್ಯಕ್ಕೆ ಮುಂದಾಗದಿದ್ದಲ್ಲಿ ಸಮಾಜದ ಸಮಸ್ತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ತಳಮಟ್ಟದಲ್ಲಿದೆ. ಸಾಕಷ್ಟು ಸಂಖ್ಯೆಯಲ್ಲಿ ಜನ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ ರಂಗಗಳಲ್ಲಿ ಹಿಂದುಳಿದಿದ್ದಾರೆ. ಸಮುದಾಯದ ಆರ್ಥಿಕ ಹಾಗೂ ಶೈಕ್ಷಣಿಕ ಮಟ್ಟದ ಬಗ್ಗೆ ತಜ್ಞರಿಂದ ಸಮಗ್ರವಾಗಿ ಪರಿಶೀಲನೆ ನಡೆಸಿ ಆ ವರದಿಯನುಸಾರ ಮೀಸಲಾತಿಯನ್ನು ಘೋಷಿಸಬೇಕೆಂದು ಮುಖ್ಯಮಂತ್ರಿಗಳಿಗೆ ಕೋರಿದ್ದಾರೆ.