ಗಾಣಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗಾಣಿಗ ಸಮುದಾಯದ ಅಭಿವೃದ್ಧಿಗೋಸ್ಕರ ನಿಗಮ ಸ್ಥಾಪನೆ ಮಾಡುವಂತೆ ಕರ್ನಾಟಕ ರಾಜ್ಯ ಗಾಣಿಗ ಹೋರಾಟ ಸಮಿತಿ ಅಧ್ಯಕ್ಷ ಗುರಣ್ಣ ಜಿ.ಗೋಡಿ ಹೇಳಿದರು.
ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕದಲ್ಲಿ 64 ಲಕ್ಷ ಜನಸಂಖ್ಯೆ ಇದ್ದು, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿದ್ದಾರೆ. ರಾಜ್ಯದ ಪ್ರತಿಯೊಬ್ಬ ಗಾಣಿಗ ಸಮುದಾಯದವರು ಒಟ್ಟಾಗಿ ಸಂಘಟನೆ ಬಲಿಷ್ಠಗೊಳಿಸಬೇಕು. ಲಿಂಗಾಯತ ವೀರಶೈವ ಗಾಣಿಗ ಜನಾಂಗಕ್ಕೆ 2ಎ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಕುರಿತು ರಾಜ್ಯ ಸರ್ಕಾರಕ್ಕೂ ಮನವಿ ಸಲ್ಲಿಸಿದ್ದೇವೆ. ನಿಗಮ ಸ್ಥಾಪನೆಯಾದ್ದಲ್ಲಿ ಸಮಾಜದ ಅಭಿವೃದ್ಧಿ ಆಗಲಿದೆ ಎಂದರು.
ಭದ್ರಾವತಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್,ಸೂಡ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯ್‍ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ, ಕರ್ನಾಟಕ ವಿಶ್ವವಿದ್ಯಾಲಯದ ಡಾ. ಟಿ.ಸಿ.ತಾರಾನಾಥ್, ಶಿವಮೊಗ್ಗ ಜಿಲ್ಲಾಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಕೆ.ವಿ.ಸಜ್ಜನ್ ಶೆಟ್ಟರ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!