ಇದು ರಾಜ್ಯದಲ್ಲೇ ಮೊದಲು, ಕ್ರೀಡಾಕೂಟಕ್ಕೆ ಆನ್‍ಲೈನ್ ನೋಂದಣಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಫೆಬ್ರವರಿ 8 ಮತ್ತು 9ರಂದು ಏರ್ಪಡಿಸಲಾಗಿದೆ. ರಾಜ್ಯದಲ್ಲಿಯೇ ಮೊಟ್ಟ ಮೊದಲ ನೋಂದಣಿಗೆ ಆನ್ ಲೈನ್ ನೋಂದಣಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,  http://bit.ly/smgsports2021 ಲಿಂಕ್ ಮೂಲಕ ಫೆಬ್ರವರಿ 7ರ ಮಧ್ಯಾಹ್ನ 2 ಗಂಟೆಯೊಳಗೆ ಆನ್ ಲೈನ್ ಮೂಲಕ ನೋಂದಣಿ ಮಾಡಬಹುದು. ಈಗಾಗಲೇ 1200 ಜನ ಹೆಸರು ನೋಂದಾಯಿಸಿದ್ದಾರೆ ಎಂದು ತಿಳಿಸಿದರು.
ಉದ್ಘಾಟನೆ | ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ನಗರದ ನೆಹರೂ ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಸಂಸದ ಬಿ.ವೈ.ರಾಘವೇಂದ್ರ ಕ್ರೀಡಾ ಜ್ಯೋತಿ ಸ್ವೀಕರಿಸುವರು. ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಧ್ವಜಾರೋಹಣ ನೆರವೇರಿಸುವರು ಎಂದರು.
9ರಂದು ಸಂಜೆ 4 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಸಮಾರೋಪ ಹಾಗೂ ಬಹುಮಾನ ವಿತರಣೆ ಸಮಾರಂಭ ನಡೆಯಲಿದೆ. ಸಿ.ಎಸ್.ಷಡಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ. ಫೆ.8ರಂದು ಸಂಜೆ 6 ಗಂಟೆ ಕುವೆಂಪು ರಂಗಮಂದಿರದಲ್ಲಿ ಜೀ ಕನ್ನಡ ಸರಿಗಮಪ ಖ್ಯಾತಿಯ ಹಾಡುಗಾರರಿಂದ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಶಾಂತರಾಜ್, ಮೋಹನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

error: Content is protected !!