ಗಾಂಜಾ ಸಮೇತ ಸಿಕ್ಕಿ ಬಿದ್ದ ವ್ಯಕ್ತಿಯ ಮೇಲಿತ್ತು ಕೊಲೆ ಯತ್ನ ಕೇಸ್!

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಮೇತ ಬಂಧಿಸಲಾಗಿದೆ. ಗೋಪಿಶೆಟ್ಟಿಕೊಪ್ಪ ಸಮೀಪ ಗಾಂಜಾ ಮಾರಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.
ಶಿವಮೊಗ್ಗ ನಗರ ನಿವಾಸಿ ತಾಸೀರ್ (27) ಎಂಬಾತನನನ್ನು ಬಂಧಿಸಲಾಗಿದೆ. ಆರೋಪಿಯಿಂದ 700 ಗ್ರಾಂ ಗಾಂಜಾ ಹಾಗೂ ಮಾರಾಟ ಮಾಡಿ ಗಳಿಸಿದ 350 ರೂ. ವಶಪಡಿಸಿಕೊಳ್ಳಲಾಗಿದೆ.
ಕ್ರಿಮಿನಲ್ ಬ್ಯಾಗ್ರೌಂಡ್ | ಗೋಪಿಶೆಟ್ಟಿ ಕೆರೆಯ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದಾಗ ಬಂಧಿಸಲಾಗಿದೆ.
ಬಂಧಿತರ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆಗೆ ಯತ್ನ ಪ್ರಕರಣ ಹಾಗೂ ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಕಾರ್ಯಾಚರಣೆ | ತುಂಗಾನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ದೀಪಕ್ ಹಾಗೂ ಸಿಬ್ಬಂದಿಗಳಾದ ಅರುಣ್, ಅರುಣ್ ಕುಮಾರ್ ಮತ್ತು ರವೀಂದ್ರ ಪ್ರಸಾದ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

 

error: Content is protected !!