5 ವರ್ಷಗಳಿಂದ ಎಸ್ಕೆಪ್ ಆಗಿದ್ದವ ಸಿಕ್ಕಿದ್ದೆಲ್ಲಿ ಗೊತ್ತಾ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಡಿ.ಎನ್.ರವಿ (27) ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.
ದೊಡ್ಡಪೇಟೆ ಠಾಣೆಯ ಪಿ.ಎಸ್.ಐ ಶಂಕರಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಖಚಿತ ಮಾಹಿತಿ ಮೇರೆಗೆ ಈತನನ್ನು ಚನ್ನಗಿರಿಯಲ್ಲಿ ಬಂಧಿಸಲಾಗಿದೆ.

error: Content is protected !!