ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆ ನಿವಾಸಿ ನಂಜುಂಡ ಸ್ವಾಮಿ(34) ಬಂಧಿತ ಆರೋಪಿ. ನ್ಯಾಯಾಲಯವು ಆರೋಪಿತನ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿದ್ದು, ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಪಿ.ಐ ಅಭಯ್ ಪ್ರಕಾಶ್ ಸೋಮನಾಳ್ ಅವರು ತಮ್ಮ ಠಾಣೆಯ ಎಎಸ್ಐ ನಾಗಭೂಷಣ್, ಗಂಗಾಧರ್ ಅವರನ್ನು ಕರ್ತವ್ಯಕ್ಕೆ ನೇಮಕ ಮಾಡಿದ್ದು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.