ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣೆ ಕೇಂದ್ರದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆ, ಸ್ಮಾರ್ಟ್ ಸಿಟಿ ಯೋಜನೆಯ ಪೂರಕ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ 17 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಕಟ್ | ಗಾರ್ಡನೆ ಏರಿಯಾದ ಎಲ್ಲ ಅಡ್ಡ ರಸ್ತೆಗಳು, ಎಲ್.ಎಲ್.ಆರ್. ರಸ್ತೆ, ಅಮೀರ್ ಅಹ್ಮದ್ ವೃತ್ತದಿಂದ ಗೋಪಿ ವೃತ್ತಕ್ಕೆ ಹೋಗುವ ಎಡಭಾಗದ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರ ಉಪ ವಿಭಾಗ 2ರ ಸಹಾಯಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.