ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ನೀಡಲಾಗಿದೆ. ಶೀಘ್ರವೇ ಕ್ರಮಕೈಗೊಳ್ಳಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಷ್ಟೇ ತಿಳಿ ಹೇಳಿದರೂ ಪದೇ ಪದೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಕಮೆಂಟ್ ಮಾಡುತ್ತಲೇ ಇದ್ದಾರೆ ಎಂದರು.
ಮುಖ್ಯಮಂತ್ರಿ. ಯಡಿಯೂರಪ್ಪ ಅವರು ಯತ್ನಾಳ್ ಗೆ ಮಾತನಾಡುವುದು ಬೇಡ ಎಂದು ಹೇಳಿದರೂ ಕೇಳುತ್ತಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷದ ನಳಿನ್ ಕುಮಾರ್ ಕಟೀಲ್ ಗಮನಕ್ಕೂ ಬಂದಿದೆ ಎಂದು ತಿಳಿಸಿದರು.
ವಿಧಾನ ಸಭೆ ಸದಸ್ಯರು ಮತ್ತು ವಿಧಾನ ಪರಿಷತ್ ಸದಸ್ಯರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಬಿಜೆಪಿ ರಾಜ್ಯ ಸಮಿತಿಗೆ ಇಲ್ಲ. ಅದು ಕೇಂದ್ರ ಸಮಿತಿಗಿದೆ. ಅದಕ್ಕಾಗಿಯೇ ಮಾಹಿತಿ ನೀಡಲಾಗಿದೆ ಎಂದರು.