ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಂಖ್ಯೆ 1 ರಿಂದ 17ರ ವರೆಗಿನ ವಾರ್ಡ್ಗಳನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಿಸಬೇಕಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಈ ಕುರಿತು ಸಲಹೆ ಹಾಗೂ ಆಕ್ಷೇಪಣೆಗಳು ಇದ್ದಲ್ಲಿ ಪ.ಪಂ. ಕಾರ್ಯಾಲಯಕ್ಕೆ ಫೆಬ್ರವರಿ 15 ರೊಳಗಾಗಿ ಸಲ್ಲಿಸುವಂತೆ ಮುಖ್ಯಾಧಿಕಾರಿ ಹೇಮಂತ್ ಎಸ್. ಡೊಳ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.