ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗಳು ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಅದೇ ರೀತಿ, ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಸಹ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ಸಕ್ರ್ಯೂಟ್ ಹೌಸ್ ನಲ್ಲಿ ಸೋಮವಾರ ಆಯೋಜಿಸಿದ್ದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಇದನ್ನೂ ಓದಿ । ವಿಜಯಪುರಕ್ಕೂ ‘ಉಡಾನ್’, ಸಿಎಂ ಯಡಿಯೂರಪ್ಪ ಭರವಸೆ
ಕಲ್ಯಾಣ ಕರ್ನಾಟಕ ಪ್ರದೇಶದ ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಆರಗ ಜ್ಞಾನೇಂದ್ರ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ವಿಜಯಪುರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಶಾಸಕ ದೇವಾನಂದ್ ಚವ್ಹಾಣ್ ಉಪಸ್ಥಿತರಿದ್ದರು.