ಇಂದು ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಯುವಪಡೆ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ವಾಲ್ಮೀಕಿ ಕಪ್ 2021ರ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಿಯನ್ನು ಫೆಬ್ರವರಿ 27ರಂದು ಬೆಳಗ್ಗೆ 10 ಗಂಟೆಗೆ ನಗರದ ನವುಲೆಯ ಜೆ.ಎನ್.ಎನ್.ಸಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ರಾಜು ಗೌಡ, ಕೆ.ಬಿ. ಅಶೋಕನಾಯ್ಕ, ಅರ್ಯವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ವಾಲ್ಮೀಕಿ ನಾಯಕ ತಂಡದ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಇತರರು ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

error: Content is protected !!