ಉತ್ತರ ಕರ್ನಾಟಕದಲ್ಲಿ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ, ಅನುದಾನ ಕೂಡ ಡಬಲ್: ಷಡಕ್ಷರಿ ಘೋಷಣೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾರ್ಚ್ ತಿಂಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಬೀದರ್ ಅಥವಾ ಉತ್ತರ ಕರ್ನಾಟಕ ಭಾಗದಲ್ಲಿ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವಜನ ಸೇವಾ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆರಂಭಗೊಂಡ ಎರಡು ದಿನಗಳ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮಾತನಾಡಿದರು.
ಪ್ರತಿ ವರ್ಷ ಮುಖ್ಯಮಂತ್ರಿಗಳು ಈ ಕ್ರೀಡಾಕೂಟಕ್ಕೆ 1 ಕೋಟಿ ರೂ. ಅನುದಾನ ನೀಡುತ್ತಿದ್ದರು. ಈ ಬಾರಿ 2 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಹೇಳಿದರು.
ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿ ಮಾತನಾಡಿದರು.
ಕ್ರೀಡಾ ಜ್ಯೋತಿ ಸ್ವೀಕರಿಸಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸರ್ಕಾರ ಮತ್ತು ನೌಕರರ ನಡುವೆ ಷಡಕ್ಷರಿ ಅವರು ಸೇತುವೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಮೇಯರ್ ಸುವರ್ಣಾ ಶಂಕರ್, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್. ಅರುಣ್, ಸೂಡ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಉಪಸ್ಥಿತರಿದ್ದರು.

error: Content is protected !!