ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಆಯವ್ಯಯವನ್ನು ಸೋಮವಾರ ಮಂಡಿಸಿದ್ದಾರೆ. ರಾಜ್ಯಕ್ಕೆ ಹಲವು ಯೋಜನೆಗಳನ್ನು ಘೋಷಿಸಿರುವ ಅವರು, ತವರು ಜಿಲ್ಲೆ ಶಿವಮೊಗ್ಗಕ್ಕೆ ವಿವಿಧ ಕ್ಷೇತ್ರಗಳಲ್ಲಿ ಕೊಡುಗೆಗಳನ್ನು ನೀಡಿದ್ದಾರೆ. ಬಹು ನಿರೀಕ್ಷಿತ ಆಯುರ್ವೇದ ಕಾಲೇಜು ಮೇಲ್ದರ್ಜೆಗೇರಿಸುವ ಕನಸನ್ನು ನನಸು ಮಾಡಿದ್ದಾರೆ. ಇದರೊಂದಿಗೆ ಘೋಷಿಸಿರುವ ಯೋಜನೆಗಳು ಇಲ್ಲಿವೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
- ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗುಗಳಲ್ಲಿ ಹಲವು ವರ್ಷಗಳಿಂದ ಅಡಕೆ ಬೆಳೆಗೆ ಕಾಡುತ್ತಿರುವ ಹಳದಿ ಎಲೆ ರೋಗದ ಸಂಶೋಧನೆಗೆ ತೀವ್ರಗೊಳಿಸುವುದು. ಪರ್ಯಾಯ ಬೆಳೆಗೆ ಪ್ರೋತ್ಸಾಹ ನೀಡಲು 25 ಕೋಟಿ ರೂಪಾಯಿ ಘೋಷಣೆ
- ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕ್ರಮವಾಗಿ 384 ಕೋಟಿ ಹಾಗೂ 220 ಕೋಟಿ ರೂಪಾಯಿ ಮಂಜೂರು ಮಾಡುವುದರೊಂದಿಗೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದು.
- ಶಿವಮೊಗ್ಗ, ಮೈಸೂರಿನಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಕಿದ್ವಾಯಿ ಸಂಸ್ಥೆ ಮಾದರಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆ
- ಪಶು ವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಗಳ ಅಳವಡಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನ ಕೇಂದ್ರ ಸ್ಥಾಪನೆಗೆ 2 ಕೋಟಿ ರೂಪಾಯಿ ಘೋಷಣೆ
- ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಉದ್ದೇಶದಿಂದ ಶಿವಮೊಗ್ಗ-ಶಿಕಾರಿಪುರ ಮಾರ್ಗದಲ್ಲಿ ಇಂಟ್ಯಾಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅಳವಡಿಸುವುದು.
- ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ
- ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಲಸಂಕಗಳನ್ನು ನಿರ್ಮಿಸುವ `ಗ್ರಾಮಬಂಧ ಸೇತುವೆ’ ಯೋಜನೆ ಅನುಷ್ಠಾನ
- ವನ್ಯಜೀವಿಗಳ ಹಾವಳಿಯಿಂದ ಉಂಟಾಗುತ್ತಿರುವ ಹಾನಿ ಪ್ರಕರಣಗಳಲ್ಲಿ ತ್ವರಿತವಾಗಿ ದಯಾತ್ಮಕ ಧನ ಪಾವತಿಸುವ ನಿಟ್ಟಿನಲ್ಲಿ `ಅರಣ್ಯ ಇ-ಪರಿಹಾರ ಯೋಜನೆ’ ಜಾರಿ