ಸುದ್ದಿ ಕಣಜ.ಕಾಂ
ಭದ್ರಾವತಿ: ವಾರ್ಷಿಕ 1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬ, ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರು ಸ್ವಯಂ ಪ್ರೇರಿತರಾಗಿ ಕಾರ್ಡ್ ವಾಪಸ್ ಮಾಡುವಂತೆ ಆಹಾರ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಒಂದುವೇಳೆ, ತಪ್ಪಿದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಅನರ್ಹರಾರು | ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟರ್ ಕ್ಕಿಂತ ಹೆಚ್ಚು ಒಣ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 10 ಚ.ಕ್ಕಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಆರ್ಸಿಸಿ ಮನೆ ಹೊಂದಿರುವವರು, ಸ್ವಂತ ಬಳಕೆಗೆ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರಾಗಿದ್ದಾರೆ.
ಅಂಹತಹವರು ಮಾರ್ಚ್ 31 ರೊಳಗಾಗಿ ಸ್ವಯಂ ಪ್ರೇರಿತವಾಗಿ ಭದ್ರಾವತಿ ನಗರ ಆಹಾರ ಕಚೇರಿಗೆ ವಾಪಸ್ ನೀಡುವುದು. ತಪ್ಪಿದಲ್ಲಿ ಇಲಾಖೆ ಅಧಿಕಾರಿಗಳೇ ಕಾರ್ಯಾಚರಣೆ ನಡೆಸಿ ಅನರ್ಹರನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುದಾಗಿ ಆಹಾರ ಇಲಾಖೆ ಸಹಾಯಕ ನಿರ್ದೇಶಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.