ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಂವಿಧಾನ ಆಶಯದ ಉಳಿವಿಗಾಗಿ ಭದ್ರಾವತಿ, ಶಿವಮೊಗ್ಗ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಮೇಲಾದ ದೌರ್ಜನ್ಯವನ್ನು ಖಂಡಿಸಿ ಕಾಂಗ್ರೆಸ್ ಬೃಹತ್ ಹೋರಾಟ ರೂಪಿಸಿದೆ. ಇದು ಕೇವಲ ಶಿವಮೊಗ್ಗ, ಭದ್ರಾವತಿಗಷ್ಟೇ ಸೀಮಿತವಾದ ವಿಷಯವಲ್ಲ ಎಂದು ಹೇಳಿದರು.
ಬಿಜೆಪಿ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸುತ್ತಿದೆ. ತಮ್ಮಿಷ್ಟಕ್ಕೆ ಬಂದಂತೆ ನಡೆದುಕೊಳ್ಳುತ್ತಿದೆ. ಅದಕ್ಕೆ ಪ್ರಜಾಪ್ರಭೂತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಇದಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾ ಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕಿ ಯಮುನಾ ರಂಗೇಗೌಡ ಉಪಸ್ಥಿತರರಿದ್ದರು.