ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದಲ್ಲಿ ಭಾನುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ಇತ್ತೀಚಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಾಗಿದೆ. ಅವರು ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
1 ಲಕ್ಷ ಲಸಿಕೆ ನೀಡುವ ಗುರಿ | ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್ ಅಂತ್ಯದೊಳಗೆ 1 ಲಕ್ಷ ವ್ಯಾಕ್ಸಿನ್ ನೀಡುವ ಯೋಜನೆ ಇದೆ. ಮೊದಲ ಹಂತವಾಗಿ ದೇಶದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ, ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 14,246 ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು ಗುರಿ ಮೀರಿದ ಸಾಧನೆ ಮಾಡಲಾಗಿದೆ. ಎರಡನೇ ಹಂತವಾಗಿ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿತರಾಗಿರುವ 45 ವರ್ಷ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬಹುದಾಗಿದೆ. ಲಸಿಕೆಯು ಜಿಲ್ಲೆಯ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಬ್ಯವಿದ್ದು, ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದಾಗಿದೆ ಎಂದು ಹೇಳಿದರು.
ಎಲ್ಲ ಪಿಎಚ್.ಸಿಗಳಲ್ಲಿ ನೀಡುವ ಯತ್ನ | ಮುಂದಿನ ಕೆಲವೇ ದಿನಗಳಲ್ಲಿ ದೇಶದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲಸಿಕೆ ತಲುಪಿಸಲು ಯತ್ನಿಸಲಾಗುವುದು. ಜಿಲ್ಲೆಯಲ್ಲಿ ಲಸಿಕೆ ವಿತರಿಸುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಶ್ರಮವನ್ನು ಅವರು ಶ್ಲಾಘಿಸಿದರು.
ಸೂಡ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಕರ್ನಾಟಕ ರಾಜ್ಯ ಆರ್ಯವೆ?ಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪ್ರಮುಖರಾದ ವೀರಭದ್ರಪ್ಪ ಪೂಜಾರ್, ಬಳ್ಳೆಕೆರೆ ಸಂತೋಷ್, ದಿವಾಕರ ಶೆಟ್ಟಿ ಇತರರಿದ್ದರು.
https://www.suddikanaja.com/2021/01/12/raf-platoon-in-bhadravathi/