ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾ ಜಲಾಶಯದಿಂದ ಮಾರ್ಚ್ 18ರಿಂದ ಏಪ್ರಿಲ್ 1ರ ವರೆಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಭದ್ರಾ ಯೋಜನಾ ವೃತ್ತದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ ಸುವರ್ಣಾವಕಾಶ
ತುಂಗಾಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳನ್ನು ಸಂರಕ್ಷಿಸಲು ನದಿಗೆ ಅಂದಾಜು 1.60 ಟಿ.ಎಂ.ಸಿ. ನೀರನ್ನು ಬಿಡಲಾಗುತ್ತಿದೆ. ಹೀಗಾಗಿ, ಸಾರ್ವಜನಿಕರು ಎಚ್ಚರಿಕೆ ವಹಿಸಲು ಕೋರಿದ್ದಾರೆ.
ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿದ ಪಂಪ್ಸೆಟ್ಗಳಿಂದ ನೀರೆತ್ತುವುದನ್ನು ಸಹ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.