ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಂದ 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಶಾಲೆಗೆ ಹಾಜರಾಗಲು ಮತ್ತು ಮುಖ್ಯವಾಹಿನಿಗೆ ತರಲು ಮನೆಮನೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ | ಕೆಜಿಎಫ್ ಚಾಪ್ಟರ್ 2, ಯುವರತ್ನ ಉಚಿತವಾಗಿ ನೋಡುವ ಸುವರ್ಣಾವಕಾಶ
ಸಮೀಕ್ಷಾದಾರರು ಮನೆ ಮನೆಗೆ ಭೇಟಿ ನೀಡಿದಾಗ ಮಗುವಿನ ಆಧಾರ್ ಕಾರ್ಡ್, ಜನನ ದಾಖಲೆ, ಪಾಸ್ಪೋರ್ಟ್ ಅಳತೆ ಫೋಟೋ, ರೇಷನ್ ಕಾರ್ಡ್, ತಂದೆ ತಾಯಿಂದಿರ ಆಧಾರ್ ಕಾರ್ಡ್ ಗಳೊಂದಿಗೆ ಮಾಹಿತಿ ನೀಡಲು ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಲ್ಲಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.