ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಯನ್ನು ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಿಂದ ಕೈ ಬಿಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಎಮ್ಮೆಹಟ್ಟಿ ಗ್ರಾಮ ಪಂಚಾಯಿತಿಯು ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ಹೊಳೆಭೈರನಹಳ್ಳಿ, ಮೂಡಲವಿಠಲಾಪುರ ಗ್ರಾಮಗಳು ಸೇರಿವೆ. ಇವುಗಳಿಂದ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯು 4.5ರಿಂದ 6.5 ಕಿ.ಮೀ. ದೂರವಾಗುತ್ತದೆ ಎಂದು ಪ್ರತಿಭಟನಕಾರರು ಜಿಲ್ಲಾಡಳಿತಕ್ಕೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಎಮ್ಮೆಹಟ್ಟಿ ಗ್ರಾಮ ಪಂಚಾಯತಿಯಲ್ಲಿ ಶೇ.99ರಷ್ಟು ಜನ ಕೃಷಿಕರಿದ್ದಾರೆ. ಪಟ್ಟಣ ಪಂಚಾಯಿತಿಗೆ ಗ್ರಾಪಂ ಸೇರಿಸುವ ಬಗ್ಗೆ ಯಾವುದೇ ಚರ್ಚೆ ಮಾಡದೇ, ಅಧಿಕಾರಿಗಳು ಗ್ರಾಮ ಸಭೆ ಮತ್ತು ವಾರ್ಡ್ ಸಭೆ ನಡೆಸದೇ ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ. ಇದು ಕೃಷಿ ಕಾರ್ಮಿಕರು ನರೇಗಾ ಯೋಜನೆ ಅಡಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.