ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಿಡಿ ಲೇಡಿ ಪ್ರಕರಣ ಸಂಬಂಧಪಟ್ಟಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಅಸಭ್ಯ ಪದಪ್ರಯೋಗ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ರಾತ್ರಿ ಮಿಂಚಿನ ಪ್ರತಿಭಟನೆ ಮಾಡಲಾಗಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಪಕ್ಷದ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ್ದಾರೆ.
ಕೂಡಲೇ ಬಂಧಿಸಲು ಒತ್ತಾಯ | ರಮೇಶ್ ಜಾರಕಿಹೊಳಿ ವಿರುದ್ಧ ಎಫ್.ಐ.ಆರ್. ದಾಖಲಾಗಿ ಎರಡು ದಿನಗಳಾಗಿವೆ. ಆದರೆ, ಇದುವರೆಗೆ ಅವರನ್ನು ಬಂಧಿಸಿಲ್ಲ ಏಕೆ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಮುಖರಾದ ಯಮುನಾ ರಂಗೇಗೌಡ, ಎಚ್.ಪಿ.ಸುಂದರೇಶ್, ಚೇತನ್, ಸೌಗಂಧಿಕ, ಶಬೀರ್ ಅಹ್ಮದ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.