ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಿ.ಡಿ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಎಸ್.ಡಿ.ಪಿ.ಐ ಜಿಲ್ಲಾ ಘಟಕ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.
ಉದ್ಯೋಗ ಕೊಡಿಸುವುದಾಗಿ ಹೇಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆನ್ನಲಾದ ಪ್ರಕರಣ ಸಂಬಂಧ ಜಾರಕಿಹೊಳಿ ವಿರುದ್ಧ ಎಫ್.ಐ.ಆರ್ ದಾಖಲಾಗಿದ್ದು, ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಕರಣದ ಆರೋಪಿಯನ್ನು ಬಂಧಿಸದೇ ಜನ ಸಾಮಾನ್ಯರಿಗೊಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ ಎಂಬುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಸಲೀಮ್ ಖಾನ್, ಪ್ರಧಾನ ಕಾರ್ಯದರ್ಶಿ ಅಲ್ಲಾ ಭಕ್ಷ, ಕಾರ್ಯದರ್ಶಿ ಖಲೀಮುಲ್ಲಾ ಉಪಸ್ಥಿತರಿದ್ದರು.